ಉತ್ತರ ಪ್ರದೇಶ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 7 ಜನ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಪಿಲಿಭಿತ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 730 ರಲ್ಲಿ ನಡೆದಿದೆ.
ಹರಿದ್ವಾರದಲ್ಲಿ ಪವಿತ್ರ ಸ್ನಾನ ಮುಗಿಸಿ ಹಿಂತಿರುಗುತ್ತಿದ್ದ 17 ಮಂದಿ ಭಕ್ತರಿದ್ದ ಪಿಕಪ್ ವಾಹನ ಗಜರೌಳ ಪೊಲೀಸ್ ಠಾಣಾ ವ್ಯಾಪ್ತಿಯ ಮಾಳಮೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಗೊಂಡಿದ್ದ 9 ಮಂದಿಯನ್ನ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಆದ್ರೆ, ಚಿಕಿತ್ಸೆ ವೇಳೆ ಇಬ್ಬರು ಮೃತಪಟ್ಟಿದ್ದು, ಉಳಿದ 7 ಜನರ ಸ್ಥಿತಿ ಚಿಂತಾಜನಕವಾಗಿದೆ.