ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದಂತೆ ಹಣ ನೀಡಲು ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿದ್ದ, ಲಷ್ಕರ್-ಎ-ತೈಬಾ (ಎಲ್‌ಇಟಿ) ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಇತರರ ವಿರುದ್ಧ ದೆಹಲಿಯ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಅಕ್ರಮ ಹಣ ವರ್ಗಾಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ವಿವಿಧ ನಿಬಂಧನೆಗಳ ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಚಾರ್ಜ್ಶೀಟ್ನ್ನು ಪರಿಗಣಿಸಿದ ನಂತರ ನ್ಯಾಯಾಲಯ ಈ ಆದೇಶ ನೀಡಿದೆ.
ಈ ಪ್ರಕರಣದ ವಿಚಾರಣೆಯನ್ನು ನಡೆಸಿದ ವಿಶೇಷ ನ್ಯಾಯಾಧೀಶ ಪ್ರವೀಣ್ ಸಿಂಗ್ ಅವರು, ಕಾಶ್ಮೀರಿ ಉದ್ಯಮಿ ಜಹೂರ್ ಅಹ್ಮದ್ ಷಾ ವಟಾಲಿ, ಪ್ರತ್ಯೇಕತಾವಾದಿ ಅಲ್ತಾಫ್ ಅಹ್ಮದ್ ಷಾ ಅಲಿಯಾಸ್ ಫುಂಟೂಶ್ ಮತ್ತು ಯುಎಇ ಮೂಲದ ಉದ್ಯಮಿ ನೇವಲ್ ಕಿಶೋರ್ ಕಪೂರ್ ವಿರುದ್ಧ ವಾರೆಂಟ್ ಹೊರಡಿಸಿದ್ದಾರೆ. ವಟಾಲಿ, ಶಾ ಮತ್ತು ಕಪೂರ್ ಅವರನ್ನು ಪ್ರಸ್ತುತ ತಿಹಾರ್ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.