ನವದೆಹಲಿ:ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ ಮುಖ್ಯಸ್ಥ ಮೊಹಮ್ಮದ್ ಯಾಸಿನ್ ಮಲಿಕ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಮರಣದಂಡನೆ ವಿಧಿಸಲು ಕೋರಿದೆ. ಎನ್‌ಐಎ ಮಲಿಕ್‌ಗೆ ಮರಣದಂಡನೆ ವಿಧಿಸಲು ಕೋರಿದ್ದರೂ, ಅಸಾಧಾರಣ ಪ್ರಕರಣಗಳಲ್ಲಿ ಮಾತ್ರ ಮರಣದಂಡನೆ ವಿಧಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಇನ್ನು ಎನ್‌ಐಎ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ನ್ಯಾಯಾಲಯ ಸೋಮವಾರ ವಿಚಾರಣೆ ನಡೆಸಲಿದೆ. ಮಲಿಕ್ ಪ್ರಸ್ತುತ ಉಗ್ರಗಾಮಿಗಳಿಗೆ ಹಣ ಸಂಗ್ರಹ ಮತ್ತು ಸಂಪಾದನೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ನ್ಯಾಯಮೂರ್ತಿ ಸಿದ್ಧಾರ್ಥ್ ಮೃದುಲ್ ಮತ್ತು ತಲ್ವಂತ್ ಸಿಂಗ್ ಅವರ ವಿಭಾಗೀಯ ಪೀಠದ ಮುಂದೆ ಎನ್‌ಐಎ ಅರ್ಜಿಯನ್ನು ಸೋಮವಾರ ವಿಚಾರಣೆಗೆ ಪಟ್ಟಿ ಮಾಡಲಾಗಿದೆ.
2022 ರಲ್ಲಿ ದೆಹಲಿ ನ್ಯಾಯಾಲಯವು ಪ್ರತ್ಯೇಕತಾವಾದಿ ನಾಯಕ ಮಲಿಕ್ ಅವರಿಗೆ 2017 ರಲ್ಲಿ ಶಿಕ್ಷೆ ವಿಧಿಸಿತ್ತು. ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳನ್ನು ಹರಡುವಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಶಿಕ್ಷೆ ವಿಧಿಸಿ ಆದೇಶಿಸಿತ್ತು. ಮಲಿಕ್‌ಗೆ ಸೆಕ್ಷನ್ 16 (ಭಯೋತ್ಪಾದನಾ ಕಾಯ್ದೆ), 17 (ಭಯೋತ್ಪಾದಕ ಕೃತ್ಯಕ್ಕೆ ನಿಧಿ ಸಂಗ್ರಹ), 18 ( ಭಯೋತ್ಪಾದಕ ಕೃತ್ಯ ಎಸಗಲು ಸಂಚು), ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆಯ 120-ಬಿ (ಅಪರಾಧ ಪಿತೂರಿ) ಮತ್ತು 124-ಎ (ದೇಶದ್ರೋಹ) 20 (ಭಯೋತ್ಪಾದಕ ಗುಂಪು ಅಥವಾ ಸಂಘಟನೆಯ ಸದಸ್ಯನಾಗಿರುವುದು) ಸೆಕ್ಷನ್ 121-ಎ (ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವ ಪಿತೂರಿ) ಮತ್ತು ಸೆಕ್ಷನ್ 15 (ಭಯೋತ್ಪಾದನೆ), ಐಪಿಸಿ ಸೆಕ್ಷನ್ 18 (ಭಯೋತ್ಪಾದನೆಗಾಗಿ ಪಿತೂರಿ) ಅಡಿಯಲ್ಲಿ ತಲಾ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.