ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಸ್ಥಳೀಯ ಪತ್ರಕರ್ತರಿಗೆ ಆನ್ಲೈನ್ನಲ್ಲಿ ಬರುತ್ತಿರುವ ಭಯೋತ್ಪಾದಕ ಬೆದರಿಕೆಗಳಿಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ಕೇಂದ್ರಾಡಳಿತ ಪ್ರದೇಶದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಶ್ರೀನಗರ, ಬದ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ನಡೆಸಿದ ತನಿಖೆಯಿಂದ ಸಿಕ್ಕ ಸುಳಿವುಗಳ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶ್ರೀನಗರ ಪೊಲೀಸರು ಟ್ವೀಟ್ನಲ್ಲಿ ತಿಳಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರವೂ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು.
ಪತ್ರಕರ್ತರಿಗೆ ಉಗ್ರರ ಬೆದರಿಕೆ: ಜಮ್ಮು ಕಾಶ್ಮೀರದ ವಿವಿಧೆಡೆ ಪೊಲೀಸ್ ದಾಳಿ - ಈಟಿವಿ ಭಾರತ ಕನ್ನಡ
ಪತ್ರಕರ್ತರಿಗೆ ಆನ್ಲೈನ್ ಮೂಲಕ ಬರುತ್ತಿರುವ ಬೆದರಿಕೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶ್ರೀನಗರ, ಬದ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಇಂದು ದಾಳಿ ನಡೆಸಿದ್ದಾರೆ.
ಪತ್ರಕರ್ತರಿಗೆ ಭಯೋತ್ಪಾದಕ ಬೆದರಿಕೆ: ಅನೇಕ ಕಡೆಗಳಲ್ಲಿ ಪೊಲೀಸರಿಂದ ದಾಳಿ