ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಭಯೋತ್ಪಾದಕರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭಿಸಿದ ನಂತರ ಪುಲ್ವಾಮಾದ ಚತ್ಪೋರಾದಲ್ಲಿ ಉಭಯ ಕಡೆಯವರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೇನೆಯೊಂದಿಗೆ ಕುಪ್ವಾರ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ಕ್ರಮವಾಗಿ ಎರಡು ಪ್ರತ್ಯೇಕ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ನಾಲ್ವರು ಭಯೋತ್ಪಾದಕರನ್ನು ತಟಸ್ಥಗೊಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.