ಡೆಹ್ರಾಡೂನ್(ಉತ್ತರಾಖಂಡ): ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ನಾಲ್ಕು ವರ್ಷಗಳ ಕಾಲ ರಾಜ್ಯದ ಸೇವೆ ಸಲ್ಲಿಸಲು ಪಕ್ಷ ನನಗೆ ಸುವರ್ಣಾವಕಾಶ ನೀಡಿತು. ಇಂತಹ ಅವಕಾಶ ನನಗೆ ಸಿಗುತ್ತದೆ ಎಂದು ಎಂದಿಗೂ ಯೋಚಿಸಿರಲಿಲ್ಲ. ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುವ ಅಧಿಕಾರವನ್ನು ಯಾರಿಗೆ ನೀಡಬೇಕು ಎಂಬುದರ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು. ಸಣ್ಣ ಹಳ್ಳಿಯಲ್ಲಿ ಹುಟ್ಟಿದ ನನಗೆ ಬಿಜೆಪಿ ಮಾತ್ರ ಇಂತಹ ಅವಕಾಶ ನೀಡಲು ಸಾಧ್ಯ. ಅದಕ್ಕಾಗಿ ನಾನು ಋಣಿಯಾಗಿರುತ್ತೇನೆ ಎಂದು ರಾವತ್ ತಿಳಿಸಿದ್ದಾರೆ.