ನವದೆಹಲಿ:ದೇಶ ಕೊರೊನಾದಿಂದ ತತ್ತರಿಸಿದ್ದು, ಜನರ ಮೂಲ ಸೌಕರ್ಯಗಳನ್ನು ಈಡೇರಿಸಲು ಭಾರತ ಸರ್ಕಾರ 23,000 ಕೋಟಿ ರೂ. ತುರ್ತು ಪರಿಹಾರ ಘೋಷಣೆ ಮಾಡಿದೆ. ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು ರಾಜ್ಯಗಳು ಈ ಪ್ಯಾಕೇಜ್‌ನಿಂದ ಹಣ ಬಳಸಿಕೊಳ್ಳಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಆರೋಗ್ಯ ಮೂಲಸೌಕರ್ಯ ಬಲಪಡಿಸಲು ಕ್ರಮ: 23 ಸಾವಿರ ಕೋಟಿ ಪರಿಹಾರ ಘೋಷಿಸಿದ ಕೇಂದ್ರ - COVID-19
ಜನರ ಮೂಲ ಸೌಕರ್ಯಗಳ ಮತ್ತು ಆರೋಗ್ಯ ಮೂಲ ಸೌಕರ್ಯಗಳನ್ನು ಬಲಪಡಿಸಲು ಭಾರತ ಸರ್ಕಾರ 23,000 ಕೋಟಿ ರೂ. ತುರ್ತು ಪರಿಹಾರ ಘೋಷಣೆ ಮಾಡಿದೆ.
ಮೂಲಸೌಕರ್ಯದ ಅವಶ್ಯಕತೆಗಳನ್ನು ತುಂಬಬೇಕಾಗಿದೆ. ಗ್ರಾಮೀಣ ಪ್ರದೇಶಗಳತ್ತ ಗಮನ ಹರಿಸುವ ಅವಶ್ಯಕತೆಯಿದೆ ಎಂದು ಅವರು ಹೇಳಿದರು. ಇನ್ನು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲೇ ಪ್ರಧಾನಿ ಈ ಪರಿಹಾರ ಘೋಷಣೆ ಮಾಡಿದ್ದಾರೆ.
ಈಗಾಗಲೇ ಕೊರೊನಾ 3ನೇ ಅಲೆಯ ನಿಯಂತ್ರಣದ ಬಗ್ಗೆ ಮಾತುಕತೆ ನಡೆಸುತ್ತಿದ್ದೇವೆ. ಕಳೆದ ಕೆಲ ದಿನಗಳಿಂದ ಈ ಆರು ರಾಜ್ಯಗಳಲ್ಲಿ ಶೇ.80ರಷ್ಟು ಹೊಸ ಪ್ರಕರಣಗಳು ಕಂಡುಬರುತ್ತಿವೆ. ಈ ಹಿನ್ನೆಲೆಯಲ್ಲಿ ಮೂರನೇ ಅಲೆ ತಡೆಯಲು ರಾಜ್ಯಗಳು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ಪ್ರತಿಪಾದಿಸಿದ್ದಾರೆ. 'ಟೆಸ್ಟ್-ಟ್ರ್ಯಾಕ್-ಟ್ರೀಟ್- ವ್ಯಾಕ್ಸಿನೇಟ್' ಎಂಬ ನಾಲ್ಕು ಪ್ರಮುಖ ಗುರಿ ಹಾಗೂ ಅಂಶಗಳನ್ನು ಇಟ್ಟುಕೊಂಡು ನಾವು ಮುಂದುವರೆಯಬೇಕಿದೆ ಎಂದು ಪ್ರಧಾನಿ ಪ್ರತಿಪಾದಿಸಿದ್ದಾರೆ.