ನೋಯ್ಡಾ: ಇತ್ತೀಚೆಗೆ ಬಿಡುಗಡೆಯಾದ ಬಾಲಿವುಡ್ ಸಿನಿಮಾ ದಿ ಕಾಶ್ಮೀರ್ ಫೈಲ್ಸ್ ದೇಶಾದ್ಯಂತ ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಈ ಚಲನಚಿತ್ರವನ್ನು ಉಚಿತವಾಗಿ ತೋರಿಸುವ ನೆಪದಲ್ಲಿ ಸಾಮಾಜಿಕ ಜಾಲತಾಣ ಮತ್ತು ವಾಟ್ಸಪ್‌ನಲ್ಲಿ ಹರಿದಾಡುತ್ತಿರುವ ಅನುಮಾನಾಸ್ಪದ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಉತ್ತರ ಪ್ರದೇಶದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ನೋಯ್ಡಾದ ಹೆಚ್ಚುವರಿ ಉಪ ಆಯುಕ್ತ ರಣವಿಜಯ್ ಸಿಂಗ್ ಬುಧವಾರ ಈ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ವಾಟ್ಸಪ್ ಅಥವಾ ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತರಿಂದ ಬರುವ ಈ ಸಿನಿಮಾದ ಲಿಂಕ್‌ಗಳನ್ನು ಕ್ಲಿಕ್ ಮಾಡಿದರೆ, ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯಲ್ಲಿರುವ ನಿಮ್ಮ ಸಂಪೂರ್ಣ ಹಣವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ.
ವಾಟ್ಸಮ್ ಅಥವಾ ಸಾಮಾಜಿಕ ಜಾಲತಾಣದಲ್ಲಿ ಅನಾಮಿಕ ವ್ಯಕ್ತಿಗಳು ಶೇರ್ ಮಾಡುವ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ ಮತ್ತು ಅವುಗಳನ್ನು ಯಾವುದೇ ಗುಂಪುಗಳಿಗೆ ಶೇರ್ ಮಾಡಬೇಡಿ ಎಂದು ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಸಲಹೆ ನೀಡಿದ್ದಾರೆ. ಜೊತೆಗೆ ಈಗಾಗಲೇ ನೀವು ಶೇರ್ ಮಾಡಿರುವ ಗುಂಪುಗಳಿಗೆ ಲಿಂಕ್ ಕ್ಲಿಕ್ ಮಾಡದಂತೆ ಆದಷ್ಟು ಬೇಗ ತಿಳಿಸಿ ಎಂದು ಸಲಹೆ ನೀಡಿದ್ದಾರೆ.