ಕರ್ನಾಟಕ

karnataka

By

Published : May 6, 2021, 10:31 PM IST

ETV Bharat / bharat

ಮಹಾರಾಷ್ಟ್ರದಲ್ಲಿ ಮರಾಠ ಮೀಸಲು ರದ್ದು.. ಇತರ ರಾಜ್ಯಗಳಿಗೂ 'ಲಕ್ಷ್ಮಣ ರೇಖೆ'!

ಮಹಾರಾಷ್ಟ್ರದಲ್ಲಿ ಶಿಕ್ಷಣದಲ್ಲಿ ಪ್ರವೇಶಾತಿ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್​ ಅಸಾಂವಿಧಾನಿಕ ಎಂದು ಘೋಷಿಸಿದೆ.

Maharashtra government for Marathas
Maharashtra government for Marathas

ಹೈದರಾಬಾದ್​:ಮಹಾರಾಷ್ಟ್ರದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಮರಾಠ ಸಮುದಾಯದ ಮೀಸಲಾತಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ. ಒಟ್ಟಾರೆ ಮೀಸಲಾತಿ ಶೇ. 50ಕ್ಕಿಂತಲೂ ಹೆಚ್ಚು ಇರುವಂತಿಲ್ಲ ಎಂದು ಹೇಳಿದ್ದು, ಮೀಸಲಾತಿ ಸಿಂಧುತ್ವ ರದ್ದುಗೊಳಿಸಿದೆ.

ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಮರಾಠ ಮೀಸಲಾತಿ ಸಮಾನತೆ ತತ್ವ ಉಲ್ಲಂಘಿಸಿದೆ ಎಂದು ಅಭಿಪ್ರಾಪಟ್ಟಿದೆ. ಜತೆಗೆ ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಕ್ಕೆ ಶೇ.10ರ ಮೀಸಲಾತಿ ಮುಂದುವರೆಸುವಂತೆ ತಿಳಿಸಿದೆ.

ಸುಪ್ರೀಂಕೋರ್ಟ್​ನ ಈ ತೀರ್ಪು ಇದೀಗ ದೇಶಾದ್ಯಂತ ಬಹುದೊಡ್ಡ ಪರಿಣಾಮ ಉಂಟು ಮಾಡುವ ಸಾಧ್ಯತೆ ಇದೆ. ಪ್ರಮುಖವಾಗಿ ತಮಿಳುನಾಡಿನಲ್ಲಿ ಶೇ 69ರಷ್ಟು ಮೀಸಲಾತಿ, ಗುಜರಾತ್​, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳ ಮೇಲೆ ಇದು ಪರಿಣಾಮ ಬೀರಲಿದೆ. ಮೀಸಲಾತಿ ಎಂದರೆ ತುಳಿತಕ್ಕೊಳಗಾದ ವರ್ಗಗಳಿಗೆ ಲಾಭದಾಯಕ ಮಾರ್ಗವೇ? ಎಂದು ಸುಪ್ರೀಂಕೋರ್ಟ್ ಪ್ರಶ್ನೆ ಮಾಡಿದೆ.

2018ರಲ್ಲಿ ಮಹಾರಾಷ್ಟ್ರ ಸರ್ಕಾರ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಕಾಯ್ದೆ (SEBC Act) ಜಾರಿಗೆ ತಂದಿತು. ಶಿಕ್ಷಣ ಸಂಸ್ಥೆ ಹಾಗೂ ಸರ್ಕಾರಿ ಉದ್ಯೋಗಿಗಳಲ್ಲಿ ಮರಾಠ ಸಮುದಾಯಕ್ಕೆ ಶೇ. 16ರಷ್ಟು ಮೀಸಲಾತಿ ಒದಗಿಸಿತ್ತು.

ಇದನ್ನೂ ಓದಿ: ಮರಾಠ ಮೀಸಲಾತಿ ಕಾಯ್ದೆ ರದ್ದುಪಡಿಸಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಹಲವು ಅರ್ಜಿ ಸಲ್ಲಿಕೆಯಾಗಿದ್ದವು. ಸರ್ವೋಚ್ಚ ನ್ಯಾಯಪೀಠ ಇದೀಗ ಮಹತ್ವದ ತೀರ್ಪು ನೀಡಿದೆ.

ABOUT THE AUTHOR

...view details