ಕರ್ನಾಟಕ

karnataka

ETV Bharat / bharat

ವಿಡಿಯೋ: ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಬೈಕ್​ ಸವಾರ! - ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ

ಮಗಳ ಮನೆಗೆ ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ.

Accident Video in West bengal
Accident Video in West bengal

By

Published : Mar 18, 2022, 7:59 PM IST

ರಾಯ್​ಗಂಜ್​(ಪಶ್ಚಿಮ ಬಂಗಾಳ):ಪಶ್ಚಿಮ ಬಂಗಾಳದ ಕೋಲ್ಕತ್ತಾದಿಂದ ಜಲ್ಪೈಗುರಿಗೆ ಮೋಟಾರ್​ ಸೈಕಲ್ ಮೇಲೆ ತೆರಳುತ್ತಿದ್ದ ವ್ಯಕ್ತಿಯೋರ್ವ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ.

ಜಲ್ಪೈಗುರಿಯಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದ ವೇಳೆ ರಾಯ್​ಗಂಜ್​ನ ಮರ್ನೈ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 34ರಲ್ಲಿ ಅಪಘಾತ ಸಂಭವಿಸಿದೆ. ಪೆಟ್ರೋಲ್ ಪಂಪ್ ಮುಂಭಾಗದ ಕಾಂಕ್ರೀಟ್​​ ಡಿವೈಡರ್​ಗೆ ಬೈಕ್​ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಬೈಕ್​ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.


ಇದನ್ನೂ ಓದಿ:ಆಲ್​​ ಇಂಗ್ಲೆಂಡ್​ ಚಾಂಪಿಯನ್​ಶಿಪ್​​​​: ಸೆಮಿಫೈನಲ್​ಗೆ ಲಗ್ಗೆ ಹಾಕಿದ ಲಕ್ಷ್ಯಸೇನ್​

ಚಿಂತಾಜನಕ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವನ್ನಪ್ಪಿದ್ದಾಗಿ ವೈದ್ಯರು ಘೋಷಣೆ ಮಾಡಿದ್ದಾರೆ. ಮೃತದೇಹವನ್ನು ರಾಯಗಂಜ್​​ನ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆ​ಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ.

ABOUT THE AUTHOR

...view details