ಹೈದರಾಬಾದ್:ಮಾಜಿ ಆಂ ಸಚಿವ ವಿವೇಕ್ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ವೈಎಸ್ ಅವಿನಾಶ್ ರೆಡ್ಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಇಂದು ವಿಚಾರಣೆ ಕೈಗೆತ್ತಿಕೊಂಡಿದ್ದ ತೆಲಂಗಾಣ ಹೈಕೋರ್ಟ್, ನಾಳೆ (ಶುಕ್ರವಾರ) ಬೆಳಗ್ಗೆ 10.30ಕ್ಕೆ ವಾದ ಆಲಿಸಲಾಗುವುದು ಎಂದು ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಎಂ.ಲಕ್ಷ್ಮಣ್ ಮಾಹಿತಿ ನೀಡಿದ್ದಾರೆ.
ಅವಿನಾಶ್ ರೆಡ್ಡಿ ನಿರೀಕ್ಷಣಾ ಜಾಮೀನಿನ ವಿಚಾರಣೆಗೆ ಸಂಬಂಧಪಟ್ಟಂತೆ ತೆಲಂಗಾಣ ಹೈಕೋರ್ಟ್‌ನ ನ್ಯಾಯಾಧೀಶರು, ವಾದಗಳು ಎಷ್ಟು ಸಮಯ ತೆಗೆದುಕೊಳ್ಳುತ್ತವೆ? ಅರ್ಜಿದಾರರನ್ನು ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ ಸಿಬಿಐ ವಕೀಲರನ್ನು ಪ್ರಶ್ನಿಸಿದರು. ಸಿಬಿಐ ಪರ ವಕೀಲರು ವಾದ ಮಂಡನೆಗೆ ಒಂದು ಗಂಟೆ ಬೇಕಾಗುತ್ತದೆ ಎಂದು ತಿಳಿಸಿದರು. ಅರ್ಜಿದಾರರ ವಾದವನ್ನು ಆಧರಿಸಿ ಸಮಯ ತೆಗೆದುಕೊಳ್ಳಲಾಗುವುದು ಎಂದು ಸುನಿತಾ ರೆಡ್ಡಿ (ಅವಿನಾಶ್ ರೆಡ್ಡಿ ಸಹೋದರಿ) ಪರ ವಕೀಲರು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ವಿಚಾರಣೆ ನಡೆಸುವುದಾಗಿ ತೆಲಂಗಾಣ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎಂ.ಲಕ್ಷ್ಮಣ್ ಪ್ರಕಟಿಸಿದರು. ಸುಪ್ರೀಂ ಕೋರ್ಟ್‌ನ ಆದೇಶವನ್ನು ಗಮನದಲ್ಲಿಟ್ಟುಕೊಂಡು ನಾಳೆ ಒಂದೇ ಪ್ರಕರಣದ ವಿಚಾರಣೆ ನಡೆಯಲಿದೆ.
ಈ ಹಿಂದೆ ತೆಲಂಗಾಣ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ವೈಎಸ್ ಅವಿನಾಶ್ ರೆಡ್ಡಿ ಅವರ ಸಹೋದರಿ ಸುನಿತಾ ರೆಡ್ಡಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು, ಆದರೆ, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ಏಪ್ರಿಲ್ 24 ರಂದು ಹೊಸ ತನಿಖೆಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್ 27 ಮತ್ತು 28ರಂದು ವಿಚಾರಣೆ ನಡೆದಿದ್ದರೂ ವಾದ-ಪ್ರತಿವಾದಗಳು ಪೂರ್ಣಗೊಳ್ಳದ ಕಾರಣ ಜೂನ್ 5ಕ್ಕೆ ಮುಂದೂಡಲಾಯಿತು.