ಅಮೃತಸರ (ಪಂಜಾಬ್): ವಾಹನ ಪಾರ್ಕಿಂಗ್ ವಿಚಾರಕ್ಕಾಗಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಈ ಸಂಘರ್ಷದಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಾರ್ಕಿಂಗ್ ವಿಚಾರಕ್ಕಾಗಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಅಮೃತಸರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಪಾರ್ಕಿಂಗ್ ವಿಚಾರಕ್ಕಾಗಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಅನೇಕರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್ನ ಅಮೃತಸರದಲ್ಲಿ ನಡೆದಿದೆ.
ಪಾರ್ಕಿಂಗ್ ವಿಚಾರಕ್ಕಾಗಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ
ಮೊಹಕಂ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪವನ್ ನಗರ ಪ್ರದೇಶದಲ್ಲಿ ವಾಹನ ಪಾರ್ಕಿಂಗ್ ವಿಚಾರವಾಗಿ ಎರಡು ಪಕ್ಷಗಳ ನಡುವೆ ಜಗಳ ನಡೆದಿದೆ. ಈ ಹೊಡೆದಾಟದಲ್ಲಿ ಒಂದು ಕಡೆಯ ಗುಂಪು ಇನ್ನೊಂದು ಕಡೆಯ ಗುಂಪಿನ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ.
ಈ ಜಗಳದಲ್ಲಿ ಅನೇಕರು ಗಾಯಗೊಂಡಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿವೆ. ಸಂಘರ್ಷದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.