ನವದೆಹಲಿ:ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಗುಜರಾತ್, ತಮಿಳುನಾಡು ರಾಜ್ಯಗಳಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಅಲ್ಲದೇ, ಕೊರೊನಾ ಪ್ರಸರಣವೂ ಕಳೆದೆರಡು ವಾರಗಳಿಂದ ಹೆಚ್ಚುತ್ತಿದ್ದು, ಪಾಸಿಟಿವಿಟಿ ದರವೂ ಅಧಿಕವಾಗುತ್ತಿದೆ. ಕೊರೊನಾ ತಡೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದೆ.
ದೇಶದ 22 ರಾಜ್ಯಗಳಲ್ಲಿ ಒಮಿಕ್ರಾನ್ ಕಾಣಿಸಿಕೊಂಡಿದ್ದು, ಒಟ್ಟು 961 ಪ್ರಕರಣಗಳು ದಾಖಲಾಗಿವೆ. ಇನ್ನು ಮಿಜೋರಾಂನ 6 ಜಿಲ್ಲೆಗಳು, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳದ 8 ಜಿಲ್ಲೆಗಳಲ್ಲಿ ಶೇ.10 ಕ್ಕಿಂತ ಹೆಚ್ಚು ಒಮಿಕ್ರಾನ್ ಕೇಸ್ಗಳು ದೃಢಪಡುತ್ತಿವೆ. ಇನ್ನಿತರ 14 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ 5 ರಿಂದ 10 ಪ್ರತಿಶತ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ತಿಳಿಸಿದ್ದಾರೆ.