ಹೈದರಾಬಾದ್: ಕರ್ನಾಟಕದಲ್ಲಿ ಹಿಜಾಬ್ ವಿವಾದದ ನಡುವೆಯೇ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಮಾತನಾಡಿ, ದೇಶದಲ್ಲಿ ಸ್ಕಾರ್ಫ್ ಧರಿಸಲು ಯಾವುದೇ ನಿಷೇಧವಿಲ್ಲ ಮತ್ತು ಸಾಂವಿಧಾನಿಕ ಹಕ್ಕುಗಳು ಮತ್ತು ಕರ್ತವ್ಯಗಳು ಸಮಾನವಾಗಿವೆ ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವರು, ಈ ವಿಷಯ ನ್ಯಾಯಾಲಯದಲ್ಲಿದೆ. ಭಾರತದಲ್ಲಿ ಹಿಜಾಬ್‌ಗೆ ಯಾವುದೇ ನಿಷೇಧವಿಲ್ಲ. ಕೆಲವು ಸಂಸ್ಥೆಗಳು ತಮ್ಮ ಶಿಸ್ತುಪಾಲನೆ ಹಿನ್ನೆಲೆ ಉಡುಗೆಯನ್ನು ಹೊಂದಿವೆ ಎಂದಿರುವ ಅವರು, ನಾವು ಸಂವಿಧಾನದ ಹಕ್ಕುಗಳ ಬಗ್ಗೆ ಮಾತನಾಡುವುದರ ಜೊತೆ ಸಾಂವಿಧಾನಿಕ ಕರ್ತವ್ಯಗಳ ಬಗ್ಗೆಯೂ ಮಾತನಾಡಬೇಕು ಎಂದರು.