ಚಂಡೀಗಢ(ಪಂಜಾಬ್):ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ.
ಚುನಾವಣಾ ಫಲಿತಾಂಶದ ಕುರಿತು ಮಾತನಾಡಿರುವ ಪಂಜಾಬ್ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ರಾಜ್ಯದ ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ. ಈ ಮೂಲಕ ಮಹತ್ವದ ನಿರ್ಧಾರವನ್ನೇ ಕೈಗೊಂಡಿದ್ದಾರೆ ಎಂದರು.
ಎಎನ್ಐ ಸುದ್ದಿಸಂಸ್ಥೆಯ ಪ್ರತಿನಿಧಿ ಜೊತೆ ಮಾತನಾಡಿರುವ ಅವರು, ನೀವು ಏನು ಬಿತ್ತಿದ್ದೀರೋ ಅದನ್ನೇ ಪಡೆಯುತ್ತೀರಿ. ಹಾಗಾಗಿ, ಈ ಚುನಾವಣೆ ಬದಲಾವಣೆಗಾಗಿ ನಡೆದಿದೆ. ಮತದಾರರು ಯಾವತ್ತೂ ತಪ್ಪು ಮಾಡುವುದಿಲ್ಲ. ಇದೇ ವೇಳೆ, ಜನರು ಚನ್ನಿ ಅವರ ಮುಖವನ್ನು ಸಿಎಂ ಅಭ್ಯರ್ಥಿಯಾಗಿ ಸ್ವೀಕರಿಸಿದರೇ? ಎಂಬ ಆಳವಾದ ಚಿಂತನೆಗೆ ನಾನು ಹೋಗುವುದಿಲ್ಲ ಎಂದು ಫಲಿತಾಂಶವನ್ನು ವಿಶ್ಲೇಷಿಸಿದರು.