ಕರ್ನಾಟಕ

karnataka

ETV Bharat / bharat

ಭ್ರಷ್ಟಾಚಾರದಲ್ಲಿ ತೊಡಗಿರುವವರು ಒಂದೇ ವೇದಿಕೆಗೆ ಬಂದರೆ, ಭ್ರಷ್ಟರ ವಿರುದ್ಧ ಕ್ರಮ: ಪ್ರಧಾನಿ ಮೋದಿ - Looting of banks under Congress rule

ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಪ್ರಧಾನ ಕಚೇರಿಯ ವಿಸ್ತರಣೆಯನ್ನು ಉದ್ಘಾಟಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ ಅವರು, ''ಭ್ರಷ್ಟಾಚಾರದಲ್ಲಿ ತೊಡಗಿರುವವರು ಒಂದೇ ವೇದಿಕೆಗೆ ಬಂದರೆ, ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು'' ಎಂದರು.

Prime Minister Narendra Modi
ನರೇಂದ್ರ ಮೋದಿ

By

Published : Mar 28, 2023, 11:10 PM IST

ನವದೆಹಲಿ: ''ಭ್ರಷ್ಟಾಚಾರದಲ್ಲಿ ತೊಡಗಿರುವವರು ಒಂದೇ ವೇದಿಕೆಗೆ ಬಂದರೆ, ಅಂತಹ ಭ್ರಷ್ಟರ ವಿರುದ್ಧ ಕ್ರಮ ಮುಂದುವರಿಯಲಿದೆ'' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಪ್ರಧಾನ ಕಚೇರಿಯ ವಿಸ್ತರಣೆಯನ್ನು ಉದ್ಘಾಟಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ಮುಂದುವರಿಸಲಾಗುವುದು ಎಂದು ಪ್ರತಿಪಾದಿಸಿದರು.

''ಭಾರತದ ಶಕ್ತಿಯು ಹೊಸ ಎತ್ತರಕ್ಕೆ ಏರುತ್ತಿರುವ ಸಮಯದಲ್ಲಿ, ದೇಶದ ಒಳಗೆ ಮತ್ತು ಹೊರಗೆ ಭಾರತ ವಿರೋಧಿ ಶಕ್ತಿಗಳು ಕೈಜೋಡಿಸುವುದು ಸಹಜ'' ಎಂದು ಮೋದಿ ಹೇಳಿದರು. "ಕೆಲವು ಪಕ್ಷಗಳು 'ಭ್ರಷ್ಟಾಚಾರಿ ಬಚಾವೋ ಅಭಿಯಾನ' (ಭ್ರಷ್ಟಾಚಾರ ಉಳಿಸಿ ಅಭಿಯಾನ) ಪ್ರಾರಂಭಿಸಿವೆ" ಎಂದು ಅವರು ಇಡಿ ಯಂತಹ ತನಿಖಾ ಸಂಸ್ಥೆಗಳ ವಿರುದ್ಧ ಪ್ರತಿಭಟಿಸುವ ವಿರೋಧ ಪಕ್ಷಗಳ ಮೇಲೆ ತೀವ್ರ ವಾಗ್ದಾಳಿ ದಾಳಿ ನಡೆಸಿದರು.

''ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಗೆ ಅನರ್ಹಗೊಳಿಸಿರುವುದು ಕೂಡ ಪ್ರತಿಪಕ್ಷಗಳಿಗೆ ನುಂಗಲಾದ ತುತ್ತಾಗಿ ಪರಿಣಮಿಸಿದೆ. ಸುಳ್ಳು ಆರೋಪಗಳಿಂದ ದೇಶ ಬಗ್ಗುವುದಿಲ್ಲ. ಭ್ರಷ್ಟಾಚಾರದ ವಿರುದ್ಧ ಕ್ರಮ ನಿಲ್ಲುವುದಿಲ್ಲ'' ಎಂದು ಮೋದಿ ಗಟ್ಟಿಯಾಗಿ ಹೇಳಿದರು.

ಭಾರತದ ವಿರೋಧಿ ಶಕ್ತಿಗಳಿಂದ ದಾಳಿ- ಮೋದಿ: "ಭಾರತ ವಿರೋಧಿ ಶಕ್ತಿಗಳು ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ಮಾಡುತ್ತಿವೆ. ದೇಶದ ಬೆಳವಣಿಗೆಯನ್ನು ತಡೆಯಲು, ಅವರು ಅದರ ಅಡಿಪಾಯದ ಮೇಲೆ ದಾಳಿ ಮಾಡುತ್ತಿದ್ದಾರೆ. ನ್ಯಾಯಾಂಗ ಮತ್ತು ತನಿಖಾ ಸಂಸ್ಥೆಗಳಂತಹ ಸಂಸ್ಥೆಗಳನ್ನು ದೂಷಿಸುವ ಮತ್ತು ಅವರ ವಿಶ್ವಾಸಾರ್ಹತೆಯನ್ನು ನಾಶಮಾಡುವ ಪಿತೂರಿಗಳಲ್ಲಿ ತೊಡಗಿದ್ದಾರೆ'' ಎಂದು ಆರೋಪಿಸಿದರು.

''ಭ್ರಷ್ಟಾಚಾರದಲ್ಲಿ ತೊಡಗಿರುವವರ ವಿರುದ್ಧ ಏಜೆನ್ಸಿಗಳು ಕಾರ್ಯನಿರ್ವಹಿಸಿದಾಗ, ಅವರನ್ನು ಗುರಿಯಾಗಿಸಲಾಗುತ್ತದೆ ಮತ್ತು ನ್ಯಾಯಾಲಯಗಳು ಈ ಶಕ್ತಿಗಳಿಗೆ ಇಷ್ಟವಾಗದ ತೀರ್ಪು ನೀಡಿದಾಗ ಅವರನ್ನು ಪ್ರಶ್ನೆ ಮಾಡಲಾಗುತ್ತಿದೆ'' ಎಂದು ಹೇಳಿದ ಪ್ರಧಾನಿ, ''ಭ್ರಷ್ಟಾಚಾರದ ವಿರುದ್ಧ ನಾವು ಇಷ್ಟೆಲ್ಲಾ ಕ್ರಮಕೈಗೊಳ್ಳುವಾಗ ಕೆಲವರು ಕೋಪಗೊಳ್ಳುವುದು ನಿಶ್ಚಿತ ಎಂದರು.

''ಸ್ವತಂತ್ರ ಭಾರತದ ಇತಿಹಾಸದಲ್ಲಿ ಹಿಂದೆಂದೂ ಭ್ರಷ್ಟಾಚಾರದ ವಿರುದ್ಧ ಇಂತಹ ದೊಡ್ಡ ಅಭಿಯಾನ ನಡೆದಿಲ್ಲ, ಇದು ಭ್ರಷ್ಟರನ್ನು ಬೆಚ್ಚಿ ಬೀಳಿಸಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವವರೆಲ್ಲರೂ ಒಂದೇ ವೇದಿಕೆಗೆ ಬಂದಿದ್ದಾರೆ'' ಎಂದ ಅವರು, ''ಬಿಜೆಪಿ ಅಧಿಕಾರಕ್ಕೆ ಬಂದರೆ, ಭ್ರಷ್ಟಾಚಾರ ದೂರವಾಗುತ್ತದೆ ಎಂದು ಜನರು ಅರಿತುಕೊಳ್ಳುತ್ತಾರೆ ಎಂದು ಪ್ರತಿಪಾದಿಸಿದರು.

ಅಂಕಿಅಂಶಗಳನ್ನು ಉಲ್ಲೇಖಿಸಿದ ಮೋದಿ, ''2004 ಮತ್ತು 2014 ರ ನಡುವಿನ ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತದಲ್ಲಿ, 5,000 ಕೋಟಿ ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ವಶಪಡಿಸಿಕೊಳ್ಳಲಾಗಿದೆ. ಒಂಬತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ ಈ ಅಂಕಿ ಅಂಶವು 1.10 ಲಕ್ಷ ಕೋಟಿ ರೂ. ಅವರ ಸರ್ಕಾರದ ಅಡಿಯಲ್ಲಿ ಕಾಯ್ದೆಯಡಿ ದಾಖಲಾದ ಪ್ರಕರಣಗಳು ದ್ವಿಗುಣಗೊಂಡಿವೆ'' ಎಂದು ಅವರು ಹೇಳಿದರು.

ಕಾಂಗ್ರೆಸ್ ಆಡಳಿತದಲ್ಲಿ ಬ್ಯಾಂಕ್‌ಗಳ ಲೂಟಿ- ಮೋದಿ:ಕಾಂಗ್ರೆಸ್ ಆಡಳಿತದಲ್ಲಿ, ಬ್ಯಾಂಕ್‌ಗಳನ್ನು ಲೂಟಿ ಮಾಡಲಾಯಿತು. 22,000 ಕೋಟಿ ರೂ.ಗಳನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಆರೋಪಿಗಳು ವಿದೇಶಕ್ಕೆ ಪಲಾಯನ ಮಾಡಿದರು ಎಂದು ಹೇಳಿದರು. ಸಿಬಿಐ ತನ್ನ ಸರ್ಕಾರದ ಅಡಿಯಲ್ಲಿ ಭ್ರಷ್ಟಾಚಾರ ಆರೋಪದ ಅಡಿಯಲ್ಲಿ 5,000 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ. ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವ ನೂರಾರು ಹಿರಿಯ ಅಧಿಕಾರಿಗಳನ್ನು ಬಲವಂತವಾಗಿ ನಿವೃತ್ತಿಗೊಳಿಸಲಾಗಿದೆ. ಭ್ರಷ್ಟರು ಕಾನೂನು ಕ್ರಮ ಎದುರಿಸುತ್ತಿದ್ದಾರೆ'' ಎಂದು ಮೋದಿ ಹೇಳಿದರು.

ಇದನ್ನೂ ಓದಿ:ಅದಾನಿ ವಿವಾದ ಪ್ರಸ್ತಾಪಿಸಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಕೇಜ್ರಿವಾಲ್ ತೀವ್ರ ವಾಗ್ದಾಳಿ..

ABOUT THE AUTHOR

...view details