ಪಾಟ್ನಾ (ಬಿಹಾರ): ಮತ್ತೊಮ್ಮೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಬೆನ್ನಲ್ಲೇ ನಿತೀಶ್ ಕುಮಾರ್ ಪ್ರಧಾನಿ ಮೋದಿಗೆ ಸವಾಲವೊಡ್ಡುವ ಮಾತುಗಳನ್ನಾಡಿದ್ದಾರೆ. 2014ರಲ್ಲಿ ಅಧಿಕಾರಕ್ಕೆ ಬಂದವರು, 2024ರಲ್ಲೂ ಗೆಲ್ಲುವರೇ ಎಂದು ನಿತೀಶ್ ಪ್ರಶ್ನಿಸಿದ್ದಾರೆ.
ಬಿಜೆಪಿ ಸಖ್ಯ ತೊರೆದು ಆರ್ಜೆಡಿ ಜೊತೆಗೆ ಮಹಾಮೈತ್ರಿ ಮಾಡಿಕೊಂಡಿರುವ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಮತ್ತು ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು. ಇದಾದ ನಂತರ ಮಾತನಾಡಿದ ನಿತೀಶ್, 2024ರ ಲೋಕಸಭಾ ಚುನಾವಣೆಗೆ ಎಲ್ಲ ಪ್ರತಿಪಕ್ಷಗಳು ಒಗ್ಗಟ್ಟಾಗಬೇಕು ಎಂದಿದ್ದಾರೆ. ಅಲ್ಲದೇ, ತಾವು ಪ್ರಧಾನಿ ಹುದ್ದೆಗೆ ಪ್ರತಿಸ್ಪರ್ಧಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.