ಚಂಡೀಗಢ, ಪಂಜಾಬ್: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 24 ರಂದು ಮೊಹಾಲಿಗೆ ಆಗಮಿಸುತ್ತಿರುವ ಹಿನ್ನೆಲೆ ಪಂಜಾಬ್ ಪೊಲೀಸರು ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗೆ ಸಿದ್ಧತೆಗಳನ್ನು ಬಹುತೇಕ ಪೂರ್ಣಗೊಳಿಸಿದ್ದಾರೆ.
ಈ ಸಿದ್ಧತೆಗಳನ್ನು ಅಂತಿಮಗೊಳಿಸಲು ಡಿಜಿಪಿ ಗೌರವ್ ಯಾದವ್ ಅವರು ಶನಿವಾರ (ಇಂದು) ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಪ್ರಸ್ತುತ, ಪಂಜಾಬ್ ಪೊಲೀಸರು ಪ್ರಧಾನಿ ಮೋದಿ ಅವರ ಕಾರ್ಯಕ್ರಮವನ್ನು ಗಮನದಲ್ಲಿಟ್ಟುಕೊಂಡು ಏಳು ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಜವಾನರನ್ನು ನಿಯೋಜಿಸಲು ನಿರ್ಧರಿಸಿದ್ದಾರೆ.
ಈ ಭದ್ರತಾ ವ್ಯವಸ್ಥೆಯು ಮೂರರಿಂದ ಐದು ಪದರಗಳನ್ನು ಹೊಂದಿರುತ್ತದೆ. ಯಾವುದೇ ಹೊರಗಿನವರಿಗೆ ಅನುಮತಿಯಿಲ್ಲದೇ ಪ್ರವೇಶಿಸಲು ಸಾಧ್ಯವಿಲ್ಲ. ಇದಲ್ಲದೇ ಈ ಪ್ರದೇಶದಲ್ಲಿ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲು ನಿರ್ಧರಿಸಲಾಗಿದೆ.