ಮುಂಬೈ (ಮಹಾರಾಷ್ಟ್ರ): ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಹಾಕಲಾಗಿದೆ. ಮುಂಬೈನ ಸರ್ ಹೆಚ್ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್ ಲೈನ್ ನಂಬರ್ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.
ಡಿಬಿ ಮಾರ್ಗ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಇಂದು ಮಧ್ಯಾಹ್ನ 12.57ರ ಸುಮಾರಿಗೆ ಬೆದರಿಕೆ ಕರೆ ಮಾಡಲಾಗಿದೆ. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ಸ್ಫೋಟಿಸುವುದಾಗಿ ಹಾಗೂ ಅಂಬಾನಿ ಕುಟುಂಬದ ಕೆಲವರ ಹೆಸರು ಹೇಳಿ ಬೆದರಿಕೆ ಹಾಕಲಾಗಿದೆ.