ಮುಂಬೈ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮುಂಬೈ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಇಮೇಲ್ ಬಂದಿದೆ. ಮೋದಿ ಅವರನ್ನು ಹತ್ಯೆ ಮಾಡಲು 20 ಸ್ಲೀಪರ್ ಸೆಲ್‌ಗಳು ಸ್ಟ್ಯಾಂಡ್‌ಬೈನಲ್ಲಿವೆ ಹಾಗೆ 20 ಕೆಜಿ ಆರ್‌ಡಿಎಕ್ಸ್ ಸಿದ್ಧವಾಗಿದೆ ಎಂದು ಮೇಲ್‌ನಲ್ಲಿ ಉಲ್ಲೇಖವಾಗಿದೆ ಎಂದು ಮೂಲಗಳು ತಿಳಿಸಿವೆ.
ತಾನು ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವುದಾಗಿ ಸಂದೇಶ ಕಳುಹಿಸಿರುವ ಅನಾಮಿಕ ಹೇಳಿಕೊಂಡಿದ್ದಾನೆ. ಹತ್ಯೆಯ ಯೋಜನೆಯನ್ನು ಈಗಾಗಲೇ ರೂಪಿಸಲಾಗಿದೆ ಮತ್ತು ಆ ಕೆಲಸಕ್ಕಾಗಿ ಕಾಯುತ್ತಿದ್ದೇವೆ ಎಂದು ಇಮೇಲ್ನಲ್ಲಿ ಬರೆಯಲಾಗಿದೆ. ಇನ್ನು NIA ಇತರ ಭದ್ರತಾ ಏಜೆನ್ಸಿಗಳೊಂದಿಗೆ ಈ ಮೇಲ್ ಅನ್ನು ಹಂಚಿಕೊಂಡಿದೆ ಮತ್ತು IP ವಿಳಾಸವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದೆ.