ಕೊಲ್ಕತ್ತಾ(ಪಶ್ಚಿಮ ಬಂಗಾಳ): ಮೂವರು ಬಾಂಗ್ಲಾದೇಶಿ ಸಹೋದರರು ಯುವತಿಯನ್ನು ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ.
ಯುವತಿ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ಆರಂಭಿಸಿದ ನ್ಯೂ ಮಾರ್ಕೆಟ್ ಠಾಣೆ ಪೊಲೀಸರು, ವಿಶೇಷ ತಂಡವನ್ನು ರಚಿಸಿ ಮಾರ್ಕ್ವಿಸ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ವೊಂದರಲ್ಲಿ ತಂಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕಿತ್ಸೆಗಾಗಿ ಬಾಂಗ್ಲಾದೇಶದಿಂದ ಕೋಲ್ಕತ್ತಾಕ್ಕೆ ಬಂದಿದ್ದ ಸಹೋದರರು ಯುವತಿಯನ್ನು ಹೋಟೆಲ್‌ಗೆ ಕರೆದೊಯ್ದು ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿದುಬಂದಿದೆ.