ಝುನ್ಝುನು (ರಾಜಸ್ಥಾನ): ಮಣ್ಣಿನ ರಾಶಿಯಲ್ಲಿ ಆಟವಾಡುತ್ತಿದ್ದಾಗ ಅವಘಡ ಸಂಭವಿಸಿ ಮೂವರು ಮಕ್ಕಳ ಸಾವನ್ನಪ್ಪಿರುವ ಘಟನೆ ಉದಯಪುರ್ವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶನಿವಾರದಂದ ನಾಲ್ವರು ಮಕ್ಕಳು ದೇವಸ್ಥಾನದ ಬಳಿಯ ಮಣ್ಣಿನ ರಾಶಿಯಲ್ಲಿ ಆಟವಾಡುತ್ತಿದ್ದರು. ಈ ವೇಳೆ, ಮಕ್ಕಳ ಮೇಲೆ ಮಣ್ಣು ಕುಸಿದು ಬಿದ್ದಿದೆ. ಆದ್ರೆ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದರು. ಸ್ಥಳೀಯರು ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರು ಯಾವುದೇ ಪ್ರಯೋಜನವಾಗಲಿಲ್ಲ. ಮೂವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.