ಮುಂಬೈ:ಇಲ್ಲಿನ ದಾದರ್ ಟರ್ಮಿನಲ್ನಿಂದ ಪುದುಚೇರಿಗೆ ಹೊರಟಿದ್ದ 11005 ನಂಬರಿನ ಪುದುಚೇರಿ ಎಕ್ಸ್‌ಪ್ರೆಸ್ ರೈಲಿನ 3 ಬೋಗಿಗಳು ಹಳಿ ತಪ್ಪಿವೆ. ಮಾಟುಂಗಾ ನಿಲ್ದಾಣದ ಬಳಿ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಳಿ ತಪ್ಪಿದ ದಾದರ್-ಪುದುಚೇರಿ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು - ಹಳಿ ತಪ್ಪಿದ ದಾದರ್-ಪುದುಚೇರಿ ಎಕ್ಸ್ಪ್ರೆಸ್ನ ಮೂರು ಬೋಗಿಗಳು
ಮುಂಬೈನ ದಾದರ್ ಟರ್ಮಿನಲ್ನಿಂದ ಪುದುಚೇರಿಗೆ ಹೊರಟಿದ್ದ 11005 ನಂಬರಿನ ಪುದುಚೇರಿ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ. ಮಾಟುಂಗಾ ನಿಲ್ದಾಣದ ಬಳಿ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Dadar-Puducherry Express
ದಾದರ್ ಟರ್ಮಿನಲ್ನಿಂದ ಹೊರಟಿದ್ದ ರೈಲು ಸುಮಾರು 9:45ರ ವೇಳೆ ಹಳಿ ತಪ್ಪಿದೆ ಎಂದು ತಿಳಿದು ಬಂದಿದ್ದು, ಪ್ರಯಾಣಿಕರಿಗೆ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿರುವ ಕಾರಣ ಈ ಟ್ರ್ಯಾಕ್ ಮೇಲೆ ತೆರಳುವ ರೈಲುಗಳ ಸಮಯದಲ್ಲಿ ವ್ಯತ್ಯಯ ಉಂಟಾಗಿದೆ.
ಸದ್ಯಕ್ಕೆ ದೊರೆತ ಮಾಹಿತಿ ಪ್ರಕಾರ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ, ಪೊಲೀಸರು ಹಾಗೂ ರೈಲ್ವೇ ಇಲಾಖೆ ಅಧಿಕಾರಿಗಳು ತೆರಳಿದ್ದು, ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.