ಲಖನೌ( ಉತ್ತರಪ್ರದೇಶ):ಸೀತಾಪುರ್ ಜಿಲ್ಲೆಯ ಮಾನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಮೋಟಾರ್ ಸೈಕಲ್‌ಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಮೂವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾರೆ.
ಎರಡು ಬೈಕ್ಗಳ ನಡುವೆ ಭೀಕರ ರಸ್ತೆ ಅಪಘಾತ : ಮೂವರು ಸಾವು, ಒಬ್ಬನಿಗೆ ಗಾಯ - ಮೋಟಾರ್ ಸೈಕಲ್‌ಗಳು ಪರಸ್ಪರ ಡಿಕ್ಕಿ
ಉತ್ತರ ಪ್ರದೇಶದ ಸೀತಾಪುರ್ ಜಿಲ್ಲಿಯಲ್ಲಿ ಎರಡು ದ್ವಿಚಕ್ರ ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಸ್ತೆ ಅಪಘಾತ
'ಮನ್‌ಪುರ್ ಪೊಲೀಸ್ ಠಾಣೆ ಸಮೀಪ ಎರಡು ದ್ವಿಚಕ್ರ ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಸೀತಾಪುರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ದೀಕ್ಷಿತ್ ತಿಳಿಸಿದ್ದಾರೆ.
ಇದನ್ನೂ ಓದಿ:ದಾವಣಗೆರೆ: ದ್ವಿಚಕ್ರ ವಾಹನಕ್ಕೆ ಆಟೋ ಡಿಕ್ಕಿ.. ಮೂವರ ಸ್ಥಿತಿ ಗಂಭೀರ