ಸಹರಾನ್ಪುರ (ಉತ್ತರಪ್ರದೇಶ) :ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ಬೃಹತ್ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಉತ್ತರಪ್ರದೇಶದಿಂದ ಜನರು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಾರೊಂದರ ನಡುವೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.
ಸಹರಾನ್ಪುರ ಜಿಲ್ಲೆಯ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಹರಾನ್ಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.