ಬಿಕಾನೇರ್ (ರಾಜಸ್ಥಾನ):ಜಿಲ್ಲೆಯ ಉಪನಗರವಾದ ಗಂಗಾಶಹರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಮೂರು ಜನರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 5 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ಸಂಜೆ ಬಿಕಾನೇರ್ನಲ್ಲಿ ಮಳೆಯಾಗಿದ್ದು, ಪರಿಣಾಮ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಇದ್ದಕ್ಕಿದ್ದಂತೆ ಕುಸಿದಿದೆ. ಈ ಅಪಘಾತದಲ್ಲಿ 3 ಜನರು ಕೊನೆಯುಸಿರೆಳೆದಿದ್ದಾರೆ. ಅವಘಡದ ನಂತರ ಸುತ್ತಮುತ್ತಲಿನ ಜನರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮೃತಪಟ್ಟ ಮತ್ತು ಗಾಯಗೊಂಡ ಜನರು ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದರು ಎಂದು ಹೇಳಲಾಗುತ್ತಿದೆ.