ಪಾಣಿಪತ್, ಹರಿಯಾಣ :ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ವ್ಯಾನ್ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಹರಿಯಾಣದ ಪಾಣಿಪತ್ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಂದ್ ಜಿಲ್ಲೆಯಲ್ಲಿ ವಾಸವಾಗಿರುವ ಕುಟುಂಬವೊಂದು ಪಾಣಿಪತ್‌ನಲ್ಲಿರುವ ಚುಲ್ಕಾನಾ ಖಾತು ಶ್ಯಾಮ್ ಧಾಮಕ್ಕೆ ಭೇಟಿ ನೀಡಿ, ದೇವರಿಗೆ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೃತರನ್ನು ಸುಶೀಲ್, ವಿಕಾಸ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ.