ಮುಂಬೈ( ಮಹಾರಾಷ್ಟ್ರ): ಟ್ರಕ್‌ಗೆ ಹಿಂದಿನಿಂದ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈ- ಅಹಮದಾಬಾದ್ ಹೆದ್ದಾರಿಯಲ್ಲಿ ನಡೆದಿದೆ.
ಟ್ರಕ್ - ಕಂಟೇನರ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಕಾರ್ಮಿಕರ ದುರ್ಮರಣ - accident between container and truck
ಗಾಜು ಸಾಗಿಸುತ್ತಿದ್ದ ಟ್ರಕ್‌ಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು, ಐವರು ಗಾಯಗೊಂಡಿರುವ ದುರ್ಘಟನೆ ಮುಂಬೈ - ಅಹಮದಾಬಾದ್ ಹೆದ್ದಾರಿಯಲ್ಲಿ ಜರುಗಿದೆ.
ಟ್ರಕ್ಗ ಕಂಟೇನರ್ ಡಿಕ್ಕಿ
ಇನ್ನು ಘಟನೆಯಲ್ಲಿ ಐವರು ಗಂಭೀರ ಗಾಯಗೊಂಡಿದ್ದು, ಅವರನ್ನು ತಲಾಸರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೀಡಾದ ಟ್ರಕ್ ಗುಜರಾತ್‌ನಿಂದ ಮುಂಬೈಗೆ ಗಾಜು ತುಂಬಿಕೊಂಡು ಬರುತ್ತಿತ್ತು ಎನ್ನಲಾಗಿದೆ.