ಅಸನ್ಸೋಲ್(ಪಶ್ಚಿಮ ಬಂಗಾಳ): ಬಿಜೆಪಿ ಹಮ್ಮಿಕೊಂಡಿದ್ದ ಬ್ಲಾಂಕೆಟ್ (ಹೊದಿಕೆ) ವಿತರಣಾ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಮಗು ಮತ್ತು ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟಿದ್ದಾರೆ. 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಪಶ್ಚಿಮ ಬಂಗಾಳದ ಅಸನ್ಸೋಲ್ನಲ್ಲಿ ಇಂದು ನಡೆಯಿತು.
ಇಲ್ಲಿನ ವಾರ್ಡ್ ನಂ.27ರ ರಾಮಕೃಷ್ಣ ದಂಗಲ್ ಪ್ರದೇಶದಲ್ಲಿ ಬಿಜೆಪಿ ಮುಖಂಡ, ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಸಮ್ಮುಖದಲ್ಲಿ ಬ್ಲಾಂಕೆಟ್ಗಳನ್ನು ವಿತರಿಸಲಾಗುತ್ತಿತ್ತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು ನೂಕುನುಗ್ಗಲು ಉಂಟಾಗಿದೆ. ಇದರ ಪರಿಣಾಮ ಸಂಭವಿಸಿದ ಕಾಲ್ತುಳಿತದಲ್ಲಿ ಅನೇಕರು ಗಾಯಗೊಂಡರು. ದುರ್ಘಟನೆಯಲ್ಲಿ ಚಂದಮಣಿ ದೇಬಿ (55), ಝಾಲಿ ಬೌರಿ (60) ಮೃತಪಟ್ಟಿದ್ದಾರೆ. ಮೃತ ಮಗುವಿನ ಗುರುತು ಪತ್ತೆಯಾಗಿಲ್ಲ. ಉಳಿದ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.