ಬಾರಾಮುಲ್ಲಾ(ಜಮ್ಮು ಕಾಶ್ಮೀರ):ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ಹೈಗಾಮ್ ಪ್ರದೇಶದಲ್ಲಿ ಲಷ್ಕರ್-ಎ-ತೊಯ್ಬಾ ಸಂಘಟನೆಗೆ ಸೇರಿದ ಮೂವರು ಹೈಬ್ರಿಡ್ ಉಗ್ರರನ್ನು ಬಂಧಿಸಿರುವುದಾಗಿ ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಇತ್ತೀಚಿಗೆ ಸ್ಥಳೀಯರಲ್ಲದ ಜನರ ಹತ್ಯೆಗಳು ಮತ್ತು ವಿವಿಧೆಡೆ ನಡೆದ ಗ್ರೆನೇಡ್ ದಾಳಿಗಳ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ವಿವಿಧ ಸ್ಥಳಗಳಿಂದ ಶಂಕಿತರನ್ನು ಬಂಧಿಸಲಾಗಿದೆ.
ಸತತ ವಿಚಾರಣೆಯ ನಂತರ ಈ ಉಗ್ರರು ಲಷ್ಕರ್-ಎ-ತೊಯ್ಬಾದ ಸಂಘಟನೆಗೆ ಸೇರಿದವರು ಎಂದು ಗೊತ್ತಾಗಿದೆ. ಬಂಧಿತರಿಂದ ಮೂರು ಚೀನಾ ನಿರ್ಮಿತ ಪಿಸ್ತೂಲ್‌ಗಳು, ಮದ್ದುಗುಂಡುಗಳು ಹಾಗೂ ಇತರ ಅಪರಾಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.