ಮುಂಬೈ: ಇಂದು ಮತ್ತೆ ಮಹಾರಾಷ್ಟ್ರದಲ್ಲಿ ಏಳು ಹಾಗೂ ಗುಜರಾತಿನಲ್ಲಿ ಎರಡು ಒಮಿಕ್ರಾನ್ ಪ್ರಕಣಗಳು ಪತ್ತೆಯಾಗಿದ್ದು, ಈ ಮೂಲಕ ಭಾರತದಲ್ಲಿ ಹೊಸ ರೂಪಾಂತರಿ ಕೇಸ್ಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಮತ್ತೆ ಹೊಸದಾಗಿ 7 ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಮುಂಬೈನಲ್ಲಿ 3 ಹಾಗೂ ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಶನ್ನಲ್ಲಿ 4 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಇತ್ತ ಗುಜರಾತಿನಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಈ ಹಿಂದೆ ಡಿಸೆಂಬರ್ 04 ರಂದು ದಕ್ಷಿಣ ಆಫ್ರಿಕಾದಿಂದ ಜಾಮ್ನಗರಕ್ಕೆ ಬಂದಿದ್ದ 72 ವರ್ಷದ ವೃದ್ಧನ ಪತ್ನಿ ಮತ್ತು ಸೋದರ ಮಾವನಿಗೆ ಸೋಂಕು ದೃಢಪಟ್ಟಿದೆ.
'ಒಮಿಕ್ರಾನ್ ಸೋಂಕಿತ ವೃದ್ಧನ ಪತ್ನಿ ಮತ್ತು ಸೋದರ ಮಾವನಿಗೆ ಕೊರೊನಾ ಪಾಸಿಟಿವ್ ಬಂದ ತಕ್ಷಣ ಅವರ ಮಾದರಿಗಳನ್ನು ಗಾಂಧಿನಗರಕ್ಕೆ ಕಳುಹಿಸಲಾಗಿತ್ತು. ಆಗ ಇಬ್ಬರಿಗೂ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ' ಎಂದು ಜಾಮ್‌ನಗರ ಕಮಿಷನರ್ ವಿಜಯ್ ಖಾರಾಡಿ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ. ಈ ಮೂಲಕ ಗುಜರಾತಿನಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 03ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ವೀರಪುತ್ರ ರಾವತ್: ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ, ಪುತ್ರಿಯರಿಂದ ಅಂತಿಮ ವಿಧಿವಿಧಾನ