ಅಮ್ರೋಹಾ(ಉತ್ತರ ಪ್ರದೇಶ): ಬಸ್ ಮತ್ತು ಟಾಟಾ ಮ್ಯಾಜಿಕ್ ಪ್ಯಾಸೆಂಜರ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲಿ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಬಚ್ರೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಧನೋರಾ - ಬಿಜ್ನೋರ್ ರಸ್ತೆಯಲ್ಲಿ, ಮುಂಭಾಗದಿಂದ ವೇಗವಾಗಿ ಬಂದ ಬಸ್ ಪ್ಯಾಸೆಂಜರ್ ವಾಹನಕ್ಕೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಘಟನೆಯ ನಂತರ ಬಸ್ ಚಾಲಕ ತಲೆಮರೆಸಿಕೊಂಡಿದ್ದಾನೆ.