ಗ್ವಾಲಿಯರ್ (ಮಧ್ಯಪ್ರದೇಶ):ರಾಜಮನೆತನಕ್ಕೆ ಸೇರಿದ ಅಂಚೆ ಕಚೇರಿ ಕಟ್ಟಡದ ಮೇಲೆ ತ್ರಿವರ್ಣ ಧ್ವಜ ಇರಿಸುವ ವೇಳೆ ಅಗ್ನಿಶಾಮಕ ದಳದ ಕ್ರೇನ್ ಮುರಿದು ಬಿದ್ದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ.
ಮೃತರು ಅಗ್ನಿಶಾಮಕ ದಳದ ಸಿಬ್ಬಂದಿಯಾಗಿದ್ದಾರೆ. ಅಂಚೆ ಕಚೇರಿಯ ಸೆಕ್ಯುರಿಟಿ ಗಾರ್ಡ್ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಗ್ವಾಲಿಯರ್ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.