ಕರ್ನಾಟಕ

karnataka

ETV Bharat / bharat

ಭೀಕರ ಅಪಘಾತ: ಮದುವೆ ಮೆರವಣಿಗೆ ಮುಗಿಸಿ ಬರುತ್ತಿದ್ದ ವರ ಮಸಣಕ್ಕೆ.. ವಧು ಆಸ್ಪತ್ರೆಗೆ! - ಉತ್ತರಪ್ರದೇಶ ಅಪಘಾತ

ಆಗ ತಾನೆ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಮನೆಗೆ ಹಿಂದಿರುಗುತ್ತಿದ್ದ ವೇಳೆ ನವವಧು ಹಾಗೂ ವರ ಚಲಿಸುತ್ತಿದ್ದ ಕಾರು ಅಪಘಾತವಾಗಿ, ವರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಭೀಕರ ಅಪಘಾತ
ಭೀಕರ ಅಪಘಾತ

By

Published : Jul 19, 2021, 7:56 AM IST

Updated : Jul 19, 2021, 8:33 AM IST

ಕಾಸಗಂಜ್​ (ಉತ್ತರಪ್ರದೇಶ): ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ವರ ಸೇರಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ವಧು ಸೇರಿ ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಸಿಧ್​​ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಧುವಿನ ಸ್ಥಿತಿ ಚಿಂತಾಜನಕವಾಗಿದ್ದರಿಂದ ಅಲಿಗಢ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಗ್ಲಾ ಭುಜ್​ಪುರ ಗ್ರಾಮದ ವಿಜೇಂದ್ರ ಶಕ್ಯ ಹಾಗೂ ಲಕ್ಷ್ಮೀ ಮದುವೆ ಮೆರವಣಿಗೆ ಮುಗಿಸಿ ಹಿಂದಿರುಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಬೃಹತ್ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆಗೆ ಸಿಎಂ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರಿಗೆ ತಲಾ ಎರಡು ಲಕ್ಷ ರೂಪಾಯಿ, ಗಾಯಾಗಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಇದನ್ನೂ ಓದಿ:ನಾಲ್ವರು ಅಂತಾರಾಜ್ಯ ಕಳ್ಳರ ಬಂಧನ: ಕೊರಟಗೆರೆ ಪೊಲೀಸರ ಕಾರ್ಯಾಚರಣೆ

Last Updated : Jul 19, 2021, 8:33 AM IST

ABOUT THE AUTHOR

...view details