ಕರ್ನಾಟಕ

karnataka

ETV Bharat / bharat

ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟ: ಮೂವರ ದುರ್ಮರಣ - fire accident in hazaribagh jharkhand

ಜಾರ್ಖಂಡ್​ನ ಹಜಾರಿಬಾಗ್​ ಜಿಲ್ಲೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.

explosion after gas tanker overturns
ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟ

By

Published : Dec 26, 2021, 12:37 PM IST

ಹಜಾರಿಬಾಗ್ (ಜಾರ್ಖಂಡ್​): ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದು ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಜಾರ್ಖಂಡ್​ನ ಹಜಾರಿಬಾಗ್​ ಜಿಲ್ಲೆಯ ಚೌಪರಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟ

ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದ್ದು, ಅದರ ತೀವ್ರತೆಗೆ ಆ ರಸ್ತೆ ಮಾರ್ಗವಾಗಿ ಸಾಗುತ್ತಿದ್ದ ಇತರ ವಾಹನಗಳಿಗೂ ಬೆಂಕಿ ತಗುಲಿದೆ. ಅಗ್ನಿಶಾಮಕ ದಳದೊಂದಿಗೆ ಪೊಲೀಸರು ಹಾಗೂ ಜಿಲ್ಲಾಡಳಿತ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಿಸಿದ್ದಾರೆ.

ಇದನ್ನೂ ಓದಿ: ಕುರ್​ಕುರೆ-ನೂಡಲ್ಸ್​ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 10 ಮಂದಿ ಬಲಿ

ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಸಂತ್ರಸ್ತರ ಕುಟುಂಬಸ್ಥರು ಜಿಲ್ಲಾಡಳಿತದ ಬಳಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ABOUT THE AUTHOR

...view details