ಪ್ರಕಾಶಂ:ಪೊದಿಲಿ ತಾಲೂಕಿನ ತಮಲ್ಲಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಕಾರು - ಬೈಕ್ ಮಧ್ಯೆ ಡಿಕ್ಕಿ: ಇಬ್ಬರು ಮಹಿಳೆಯರು ಸೇರಿ ಮೂವರು ಸ್ಥಳದಲ್ಲೇ ಸಾವು! - ಪ್ರಕಾಶಂ ರಸ್ತೆ ಅಪಘಾತ,
ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಮಹಿಳೆಯರು ಸೇರಿ ಮೂವರು ಸ್ಥಳದಲ್ಲೇ ಸಾವು
ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಒಂಗೋಲ್ನಿಂದ ಪೊದಿಲಿಗೆ ಬರುತ್ತಿದ್ದ ದ್ವಿಚಕ್ರ ವಾಹನವು ಪೊದಿಲಿಯಿಂದ ಒಂಗೋಲ್‌ಗೆ ಹೋಗುತ್ತಿದ್ದ ಕಾರ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಬೈಕ್ನಲ್ಲಿದ್ದ ವ್ಯಕ್ತಿ ಮತ್ತು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಕಾನಿಗಿರಿ ವಲಯಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.