ಪಾಟ್ನಾ(ಬಿಹಾರ):ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ವಾಹನಕ್ಕೆ ಟ್ರಕ್ವೊಂದು ಡಿಕ್ಕಿ ಹೊಡೆದಿರುವ ಪರಿಣಾಮ ಮೂವರು ಪೊಲೀಸರು ದುರ್ಮರಣಕ್ಕೀಡಾಗಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆ ಪಕ್ಕದಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ವಾಹನಕ್ಕೆ ಟ್ರಕ್ವೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಘಟನೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪೋಖ್ರಾಜ್, ಪೊಲೀಸ್ ವಾಹನದ ಚಾಲಕ ಪ್ರಭು ಸಾವೋ ಹಾಗೂ ರಾಜೇಶ್ ಕುಮಾರ್ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಎಎಸ್ಐ ಸಿಯರಾನ್ ಪಾಸ್ವಾನ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಶ್ರೀಕಾಂತ್ ಸಿಂಗ್ ಪಾಟ್ನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.