ವಿಶಾಖಪಟ್ಟಣಂ(ಆಂಧ್ರಪ್ರದೇಶ): ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ನೇಹಿತರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಕವರಾಪಲೆಂ ಬಳಿಯ ಪಿ.ಪಿ. ಅಗ್ರಹಾರಂ ಬಳಿ ಸಂಭವಿಸಿದೆ.
ಆರ್.ಹೇಮಂತ್, ಅನೀಶ್, ಹರ್ಷಿತ್ ಮೃತ ವಿದ್ಯಾರ್ಥಿಗಳು. ಇವರು ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಹೇಮಂತ್ ಮನೆಯಲ್ಲಿ ಕಾರ್ಯಕ್ರಮವಿದ್ದ ಹಿನ್ನೆಲೆ ತನ್ನ ಸ್ನೇಹಿತರೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಮುಂದೆ ಬರುತ್ತಿದ್ದ ವಾಹನಕ್ಕೆ ದಾರಿ ಬಿಡಲು ಹೋಗಿ ಬೈಕ್ ಅನ್ನು ಮರಕ್ಕೆ ಗುದ್ದಿದ್ದಾನೆ. ಪರಿಣಾಮ ಸ್ಥಳದಲ್ಲೇ ಹೇಮಂತ್ ಮೃತಪಟ್ಟಿದ್ದು, ಅನೀಶ್ ಮತ್ತು ಹರ್ಷಿತ್ ಗಂಭೀರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.