ಕರ್ನಾಟಕ

karnataka

ETV Bharat / bharat

ಕಾಶ್ಮೀರದಲ್ಲಿ ಎನ್‌ಕೌಂಟರ್‌; ಮೂವರು ಉಗ್ರರ ಹತ್ಯೆ - ಮೂವರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವ. ಬಂಡಿಪೋರಾದ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

three unidentified terrorists killed in bandipora encounter today
ಕಾಶ್ಮೀರದಲ್ಲಿ ಎನ್‌ಕೌಂಟರ್‌; ಮೂವರು ಉಗ್ರರ ಹತ್ಯೆ

By

Published : Jul 24, 2021, 10:51 PM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚುತ್ತಲೇ ಇದ್ದು, ಬಂಡಿಪೋರಾದ ಶೋಕ್ ಬಾಬಾ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಮೂವರು ಅಪರಿಚಿತ ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು-ಕಾಶ್ಮೀರ ಪೊಲೀಸರೊಂದಿಗೆ ಸೇನೆ ಜಂಟಿ ಕಾರ್ಯಾಚರಣೆಯನ್ನು ನಡೆಸಿದೆ. ಇನ್ನೂ ಪ್ರತಿದಾಳಿ ನಡೆಯುತ್ತಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಪಡೆಗಳು ಶೋಕ್ ಬಾಬಾ ಅರಣ್ಯ ಪ್ರದೇಶದ ಸುಂಬ್ಲರ್‌ನಲ್ಲಿ ಭಯೋತ್ಪಾದಕರು ಇದ್ದಾರೆಂಬ ಮಾಹಿತಿ ಪಡೆದ ಭದ್ರತಾ ಪಡೆಗಳು, ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದಾಗ ಎನ್‌ಕೌಂಟರ್‌ ಆರಂಭಿಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details