ಕರ್ನಾಟಕ

karnataka

By

Published : Feb 14, 2022, 7:36 AM IST

ETV Bharat / bharat

ಮಾಸದ ಪುಲ್ವಾಮಾ ದಾಳಿಯ ಕಹಿ ನೆನಪು: ಆ ಕರಾಳ ದಿನಕ್ಕೆ ಇಂದು ಮೂರು ವರ್ಷ

ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಸಿಆರ್‌ಪಿಎಫ್ ಸಿಬ್ಬಂದಿಯನ್ನು ಹೊತ್ತ ಬಸ್‌ಗೆ ಸ್ಫೋಟಕಗಳನ್ನು ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿದ ಪರಿಣಾಮ, ಭಾರತೀಯ ಯೋಧರು ವೀರ ಮರಣವನ್ನಪ್ಪಿದ್ದರು.

Three years for Pulwama terrorist Attack
ಪುಲ್ವಾಮಾ ಉಗ್ರರ ದಾಳಿ

ನವದೆಹಲಿ:ಇಂದಿಗೆ ಪುಲ್ವಾಮಾ ಭಯೋತ್ಪಾದಕ ದಾಳಿಯ ಕರಾಳ ನೆನಪಿಗೆ ಮೂರು ವರ್ಷವಾಗಿದೆ. 2019ರ ಫೆಬ್ರವರಿ 14ರಂದು ಈ ಉಗ್ರರ ದಾಳಿ ನಡೆದಿತ್ತು. ಪಾಕಿಸ್ತಾನದ ಹೇಡಿತನದ ಅಮಾನವೀಯ ದುಷ್ಕೃತ್ಯ ಜನರ ಸ್ಮೃತಿಪಟಲದಲ್ಲಿ ಶಾಶ್ವತವಾಗಿ ಉಳಿಯಲಿದೆ.

ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಸಿಆರ್‌ಪಿಎಫ್ ಸಿಬ್ಬಂದಿಯನ್ನು ಹೊತ್ತ ಬಸ್‌ಗೆ ಸ್ಫೋಟಕ ತುಂಬಿದ್ದ ವಾಹನವನ್ನು ಡಿಕ್ಕಿ ಹೊಡೆಸಿದ ಪರಿಣಾಮ, ಭಾರತೀಯ ಯೋಧರು ವೀರ ಮರಣವನ್ನಪ್ಪಿದ್ದರು. ಪಾಕಿಸ್ತಾನಿ ಉಗ್ರರ ಅಟ್ಟಹಾಸಕ್ಕೆ ಸಿಲುಕಿ 39ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದರು. ಅಲ್ಲದೆ, ಅನೇಕರು ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ:ಇಸ್ರೋದಿಂದ ವರ್ಷದ ಮೊದಲ ಉಡ್ಡಯನ ಯಶಸ್ವಿ: ಕಕ್ಷೆ ಸೇರಿದ 3 ಉಪಗ್ರಹಗಳು

ಜೈಷ್-ಎ-ಮೊಹಮ್ಮದ್ ಎಂಬ ಭಯೋತ್ಪಾದಕ ಸಂಘಟನೆಯು ಈ ದಾಳಿಯ ಹೊಣೆ ಹೊತ್ತುಕೊಂಡಿತ್ತು. ಈ ದಾಳಿಯ ಬಳಿಕ ಭಾರತವು ತಕ್ಕ ಪ್ರತ್ಯುತ್ತರ ನೀಡಿದೆ. ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಯ ಬಾಲಕೋಟ್​ನಲ್ಲಿ ಭಯೋತ್ಪಾದಕ ಶಿಬಿರಗಳ ಮೇಲೆ ವಾಯುದಾಳಿ ನಡೆಸಲಾಗಿತ್ತು.

ಪುಲ್ವಾಮಾ ಘಟನೆಯಲ್ಲಿ ಹುತಾತ್ಮರಾದ ಯೋಧರಿಗೆ ಇಂದು ಇಡೀ ದೇಶಾದ್ಯಂತ ಗೌರವ ಸಲ್ಲಿಸಲಾಗುತ್ತಿದೆ.

ABOUT THE AUTHOR

...view details