ಕರ್ನಾಟಕ

karnataka

ETV Bharat / bharat

ಸಿನಿಮಾ ನೋಡಲು ತೆರಳುತ್ತಿದ್ದ ಮೂವರು ಬಾಲಕರ ಮೇಲೆ ಹಲ್ಲೆ, ದರೋಡೆ ಯತ್ನ - ಕುಶಿನಗರ ಜಿಲ್ಲೆಯಲ್ಲಿ ಮೂವರು ಬಾಲಕರ ಮೇಲೆ ಹಲ್ಲೆ

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಫಾಜಿಲ್‌ನಗರದಲ್ಲಿ ಸಿನಿಮಾ ವೀಕ್ಷಿಸಲು ತೆರಳುತ್ತಿದ್ದ ಮೂವರು ಬಾಲಕರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿ, ದರೋಡೆಗೆ ಯತ್ನಿಸಿದ್ದಾರೆ.

Three youth on way to watch movie attacked by knife-borne goons in UP's Kushinagar
ಸಿನಿಮಾ ನೋಡಲು ತೆರಳುತ್ತಿದ್ದ ಮೂವರ ಮೇಲೆ ಅಪರಿಚಿತರಿಂದ ಹಲ್ಲೆ, ದರೋಡೆ ಯತ್ನ

By

Published : Mar 19, 2022, 11:48 AM IST

Updated : Mar 19, 2022, 12:13 PM IST

ಕುಶಿನಗರ, ಉತ್ತರ ಪ್ರದೇಶ:ಸಿನಿಮಾ ವೀಕ್ಷಿಸಲು ತೆರಳುತ್ತಿದ್ದ ಮೂವರು ಬಾಲಕರ ಮೇಲೆ ಅಪರಿಚಿತ ವ್ಯಕ್ತಿಗಳು ಚಾಕು ತೋರಿಸಿ ದರೋಡೆಗೆ ಯತ್ನಿಸಿ, ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಫಾಜಿಲ್‌ನಗರದಲ್ಲಿ ನಡೆದಿದೆ.

ಜೋಕ್ವಾ ಬಜಾರ್‌ನ ನಿವಾಸಿಗಳಾದ 16 ವರ್ಷದ ಕಿಶನ್ ಜೈಸ್ವಾಲ್ , 14 ವರ್ಷದ ಸಾಹು ಜೈಸ್ವಾಲ್ ಮತ್ತು 16 ವರ್ಷದ ಸಚಿನ್ ಗೌರ್ ಗಂಭೀರವಾಗಿ ಹಲ್ಲೆಗೊಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವನ್ನು ವೀಕ್ಷಿಸಲು ಆ ಮೂವರೂ ಥಿಯೇಟರ್‌ಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದ್ದು, ದುಷ್ಕರ್ಮಿಗಳು ಮೊಬೈಲ್ ಫೋನ್ ಮತ್ತು ಹಣವನ್ನು ದರೋಡೆ ಮಾಡಲು ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ:ಪತಿಗೆ ಪರಸ್ತ್ರೀಯರೊಂದಿಗೆ ಅಕ್ರಮ ಸಂಬಂಧ ಆರೋಪ: ಡೆತ್​​​​ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

ಹಲ್ಲೆ ನಡೆಯುವ ವೇಳೆ ಚೀರಾಟ ಕೇಳಿ ಸ್ಥಳೀಯರು ಧಾವಿಸಿದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರ ಬೇಜವಾಬ್ದಾರಿಯೇ ಘಟನೆಗೆ ಕಾರಣ ಎಂದು ಗಾಯಾಳುಗಳ ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Last Updated : Mar 19, 2022, 12:13 PM IST

ABOUT THE AUTHOR

...view details