ಕರ್ನಾಟಕ

karnataka

ಶಾಲೆಗೆ ಬಡಿದ ಸಿಡಿಲು: 30 ವಿದ್ಯಾರ್ಥಿಗಳಿಗೆ ಗಾಯ, ಓರ್ವ ಬಾಲಕಿ ಸ್ಥಿತಿ ಗಂಭೀರ

By

Published : Jul 23, 2022, 5:59 PM IST

ಶಾಲಾ ಆವರಣದ ಬಳಿ ಸಿಡಿಲು ಬಡಿದ ಪರಿಣಾಮ ಸುಮಾರು 30 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ.

lightning struck School
lightning struck School

ಬೊಕಾರೊ(ಜಾರ್ಖಂಡ್​):ಶಾಲಾ ಆವರಣದಲ್ಲಿ ಮಕ್ಕಳು ಆಡವಾಡ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ 30 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಾರ್ಖಂಡ್​ನ ಬೊಕಾರೊ ಜಿಲ್ಲೆಯಲ್ಲಿ ನಡೆದಿದೆ. ಎಲ್ಲ ಮಕ್ಕಳನ್ನ ಈಗಾಗಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ.

ಬೊಕಾರೊ ಜಿಲ್ಲೆಯ ಜರಿದಿಹ್​ ಬ್ಲಾನ್​ ಬಂಧ್ದಿಹ್​ ಶಾಲೆಯಲ್ಲಿ ಮಧ್ಯಾಹ್ನ ಈ ಘಟನೆ ನಡೆದಿದೆ. ತರಗತಿಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಿಡಿಲು ಬಡಿದ ಸಂದರ್ಭದಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಯ ವಿವಿಧ ಕೊಠಡಿಗಳಲ್ಲಿದ್ದರು.

ಇದನ್ನೂ ಓದಿರಿ:ನಟಿ ಮನೆಯಲ್ಲಿ ಕೋಟಿ - ಕೋಟಿ ಹಣ ಜಪ್ತಿ: ಇಡಿಯಿಂದ ಅರ್ಪಿತಾ ಮುಖರ್ಜಿ ಬಂಧನ

ವಿದ್ಯಾರ್ಥಿಗಳನ್ನ ರೆಫರಲ್​ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸದ್ಯ ಚಿಕಿತ್ಸೆ ಮುಂದುವರೆದಿದೆ. ಗಂಭೀರವಾಗಿ ಗಾಯಗೊಂಡಿರುವ ಓರ್ವ ವಿದ್ಯಾರ್ಥಿಯನ್ನ ಬೊಕಾರೊ ಜನರಲ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಡಿಲು ಬಡಿದ ಕಾರಣ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯ ಶಶಿ ಮಹತೊ ಮಾತನಾಡಿದ್ದು, ತುಂತುರು ಮಳೆ ಸುರಿಯುತ್ತಿತ್ತು. ಈ ವೇಳೆ, ರಭಸವಾಗಿ ಗಾಳಿ ಬೀಸಿದ್ದು, ವಿದ್ಯುತ್ ಕೈಕೊಟ್ಟಿದೆ. ಇದರ ಬೆನ್ನಲ್ಲೇ ಸಿಡಿಲು ಬಡೆದಿದೆ. ಹೀಗಾಗಿ, ಮಕ್ಕಳು ಕಿರುಚಾಡಿದ್ದಾರೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದ ಓರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details