ಶಾಮ್ಲಿ (ಉತ್ತರಪ್ರದೇಶ) :ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಗೆ ಸ್ಪರ್ಧಿಸುವಂತೆ ರೈತ ಮುಖಂಡ ರಾಕೇಶ್ ಟಿಕಾಯತ್ ಅವರಿಗೆ ಮನವಿ ಮಾಡಿದೆ. ಆದರೆ, ಇಂದು (ಶನಿವಾರ) ಆ ಮನವಿಯನ್ನು ರಾಕೇಶ್ ಟಿಕಾಯತ್ ತಿರಸ್ಕರಿಸಿದ್ದಾರೆ. ಟಿಕಾಯತ್ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ಅಗತ್ಯವಿಲ್ಲ ಎಂದು ಹೇಳಿದರು.
ಉತ್ತರಪ್ರದೇಶದ ಶಾಮ್ಲಿಯಲ್ಲಿ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಅಗತ್ಯವಿಲ್ಲ. ಆದರೆ, ಉತ್ತರಪ್ರದೇಶದಲ್ಲಿ ವಿದ್ಯುತ್ ದರ ಹೆಚ್ಚಳ ಹಾಗೂ ರಾಜ್ಯದ ಕಬ್ಬು ಬೆಳೆಗಾರರಿಗೆ ಹಣ ಪಾವತಿ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುವುದರ ವಿರುದ್ಧ ಹೋರಾಡುವುದಾಗಿ ತಿಳಿಸಿದ್ದಾರೆ.
ಭವಿಷ್ಯದಲ್ಲಿ ನಾವು ನಡೆಸುವ ಪ್ರತಿಭಟನೆಗಳಲ್ಲಿ ಬೆಳೆಗಳಿಗೆ ಗರಿಷ್ಠ ಬೆಂಬಲ ಬೆಲೆ ನೀಡಿಕೆ ಮತ್ತು ಉತ್ತರಪ್ರದೇಶದಲ್ಲಿ ವಿದ್ಯುತ್ ದರ ಹೆಚ್ಚಳ ವಿಚಾರಗಳು ಇರುತ್ತವೆ ಎಂದು ರಾಕೇಶ್ ಟಿಕಾಯತ್ ಹೇಳಿದರು.