ರೇವಾ(ಮಧ್ಯಪ್ರದೇಶ):ಸೊಹಗಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಶುಕ್ರವಾರ ತಡರಾತ್ರಿ ಟೈಂ ಬಾಂಬ್ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದಾರೆ.
ಸೇತುವೆಯ ಕೆಳಗೆ ಕೆಂಪು ಬಣ್ಣದ ಟೈಮರ್ ಬಾಂಬ್:ರೇವಾವನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 30ರ ಸೊಹಗಿ ಪೊಲೀಸ್ ಠಾಣೆ ವ್ಯಾಪ್ತಿಯ ಮೇಲ್ಸೇತುವೆ ಕೆಳಗೆ ಅನುಮಾನಾಸ್ಪದ ಸ್ಥಿತಿಯಲ್ಲಿ ಕೆಂಪು ಬಣ್ಣದ ಬಾಕ್ಸ್ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಪತ್ತೆಯಗಿದೆ.
ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಬಾಂಬ್ ನಿಷ್ಕ್ರಿಯ ದಳಕ್ಕೆ ತಿಳಿಸಿದ್ದಾರೆ. ಪೊಲೀಸರ ಮಾಹಿತಿ ಮೇರೆಗೆ ರೇವಾದಿಂದ ಬಾಂಬ್ ನಿಷ್ಕ್ರಿಯ ದಳ ತಡ ಆಗಮಿಸಿದ್ದು, ತನಿಖೆಯ ನಂತರವೇ ಸಂಪೂರ್ಣ ವಿಷಯ ತಿಳಿಯಲಿದೆ.