ಮುಂಬೈ(ಮಹಾರಾಷ್ಟ್ರ): ಮಲಾಡ್ನಲ್ಲಿ ನಿರ್ಮಾಣಗೊಂಡಿರುವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ಗೆ ಟಿಪ್ಪು ಸುಲ್ತಾನ್ ಹೆಸರಿಡಲಾಗಿದ್ದು, ಇದಕ್ಕೆ ಇನ್ನಿಲ್ಲದ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಬಿಜೆಪಿ, ಭಜರಂಗದಳ ಸೇರಿದಂತೆ ವಿವಿಧ ಪಕ್ಷಗಳು ಪ್ರತಿಭಟನೆ ನಡೆಸಿದವು.
ಮಹಾರಾಷ್ಟ್ರದ ಮಲಾಡ್ನಲ್ಲಿ ನಿರ್ಮಾಣಗೊಂಡಿರುವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ಗೆ ಸಚಿವ ಅಸ್ಲಾಂ ಶೇಖ್ ಇಂದು ಉದ್ಘಾಟನೆ ಮಾಡಿದ್ದು, ಅದಕ್ಕೆ ಟಿಪ್ಪು ಸುಲ್ತಾನ್ ಎಂದು ನಾಮಕರಣ ಮಾಡಿದ್ದಾರೆ. ಇದರ ಬೆನ್ನಲ್ಲೇ ವಿವಾದ ಭುಗಿಲೆದ್ದಿದೆ. ಭಾರತೀಯ ಜನತಾ ಪಾರ್ಟಿ, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ ಸಹ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದವು.
ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ VHP ಮುಖಂಡ ಶ್ರೀರಾಜ್ ನಾಯರ್, ಮುಂಬೈನಲ್ಲಿ ಶಾಂತಿ ಕದಡುವ ಉದ್ದೇಶದಿಂದಲೇ ಈ ಹೆಸರು ಇಡಲಾಗಿದೆ. ನಮ್ಮದು ಶಾಂತಿ ಭೂಮಿ. ಹಿಂದೂ ವಿರೋಧಿಯ ಹೆಸರು ಇಟ್ಟಿರುವುದು ಖಂಡನೀಯ ಎಂದಿದ್ದಾರೆ.