ಕೋಲ್ಕತ್ತಾ (ಪಶ್ಚಿಮ ಬಂಗಾಳ): ನಂದಿಗ್ರಾಮ ಭೇಟಿ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ), ಈ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.
ತನಿಖೆಯ ಮೂಲವನ್ನು ನಿರ್ಧರಿಸುವ ವಿಚಾರ ಭಾರತದ ಚುನಾವಣಾ ಆಯೋಗಕ್ಕೆ ಬಿಟ್ಟಿದ್ದು. ನಾವು ಯಾವುದೇ ನಿರ್ದಿಷ್ಟ ತನಿಖೆಗೆ ಒತ್ತಾಯಿಸಲಿಲ್ಲ. ಆದರೆ ಪಕ್ಷಪಾತವಿಲ್ಲದ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದೇವೆ. ನಂದಿಗ್ರಾಮದಲ್ಲಿ ಘಟನೆ ನಡೆದಾಗ ಅಲ್ಲಿ ಪೊಲೀಸರು ಉಪಸ್ಥಿತರಿರಲಿಲ್ಲ. ಈ ದಾಳಿಯು ಬಹುದೊಡ್ಡ ಪಿತೂರಿಯಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಟಿಎಂಸಿ ಮುಖಂಡ ಸೌಗತಾ ರಾಯ್ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಪ್ರಸ್ತುತ ದೇಶದಲ್ಲಿರುವ ಏಕೈಕ ಮಹಿಳಾ ಮುಖ್ಯಮಂತ್ರಿ. ಈ ಘಟನೆಯ ಬಗ್ಗೆ ಎಲ್ಲರೂ ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ ದೇಶದ ಪ್ರಧಾನಿ ಮತ್ತು ಗೃಹ ಸಚಿವರಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಯಾಕೆ, ಹೇಗೆ ಹಲ್ಲೆ ನಡೆಯಿತು ಎಂಬುದನ್ನು ಸಾಬೀತುಪಡಿಸುವ ಸಂಪೂರ್ಣ ಜವಾಬ್ದಾರಿ ಚುನಾವಣಾ ಆಯೋಗದ ಮೇಲಿದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಪಾರ್ಥ ಚಟರ್ಜಿ ಹೇಳಿದ್ದಾರೆ.