ಕೋಲ್ಕತ್ತಾ (ಪಶ್ಚಿಮ ಬಂಗಾಳ): ನಂದಿಗ್ರಾಮ ಭೇಟಿ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರು, ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.
ಕೋಲ್ಕತ್ತಾ, ಉತ್ತರ 24 ಪರಗಣ, ದಕ್ಷಿಣ 24 ಪರಗಣ, ಹೂಗ್ಲಿ, ಹೌರಾ ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆದಿದೆ. ಉತ್ತರ 24 ಪರಗಣ ಜಿಲ್ಲೆಯಲ್ಲಿ ಟಿಎಂಸಿ ಮುಖಂಡ ಮದನ್ ಮಿತ್ರಾ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಮತಾ ವಿರುದ್ಧ ಬಿಜೆಪಿ ಸಂಚು ಹೂಡಿದೆ ಎಂದು ಘೋಷಣೆ ಕೂಗಿದರು.
ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆದಿರುವುದಾಗಿ ಆರೋಪಿಸಿ ಟಿಎಂಸಿ ಪ್ರತಿಭಟನೆ ನಂದಿಗ್ರಾಮದ ಬಿರುಲಿಯಾ ಗ್ರಾಮದಲ್ಲಿ ಇಂದು ಬೆಳಗ್ಗೆ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ತಕ್ಷಣವೇ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರು.
ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಶಾಂತಿ ಕಾಪಾಡಿ.. ಆಸ್ಪತ್ರೆಯಿಂದಲೇ ವಿಡಿಯೋ ಹರಿಬಿಟ್ಟ ಮಮತಾ
ರಾಜ್ಯದಲ್ಲಿ 294 ಸ್ಥಾನಗಳಿಗೆ ಎಂಟು ಹಂತದಲ್ಲಿ ಮಾರ್ಚ್ 27 ಮತ್ತು ಏಪ್ರಿಲ್ 29 ರವರೆಗೆ ವಿಧಾನಸಭಾ ಚುನಾವಣೆ ನಡೆಯಲಿದೆ. ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಸುವೇಂದು ಅಧಿಕಾರಿ ವಿರುದ್ಧ ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ಸ್ಪರ್ಧಿಸುತ್ತಿದ್ದಾರೆ. ನಿನ್ನೆ ನಂದಿಗ್ರಾಮದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಡೆದ ತಳ್ಳಾಟದಲ್ಲಿ ದೀದಿ ಗಾಯಗೊಂಡಿದ್ದರು. ಕೋಲ್ಕತ್ತಾ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ಮಮತಾರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.