ಚೆನ್ನೈ (ತಮಿಳುನಾಡು): ರಾಜ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಕೋವಿಡ್ ನಿಯಂತ್ರಿಸಲು ತಮಿಳುನಾಡು ಸರ್ಕಾರ ಮೇ 10ರಿಂದ ಮೇ 24ರವರೆಗೆ ಲಾಕ್ಡೌನ್ ಹೇರಿದೆ.
ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಎರಡು ವಾರಗಳ ಅವಧಿಗೆ ಲಾಕ್ಡೌನ್ ವಿಧಿಸಿ ಆದೇಶ ಹೊರಡಿಸಿದ್ದಾರೆ.