ಚೆನ್ನೈ:ಗರ್ಭಿಣಿಯರಿಗೆ ಸರ್ಕಾರದಿಂದ ನೀಡಲಾಗುವ ಪೌಷ್ಟಿಕಾಂಶವುಳ್ಳ ಆಹಾರ ವಿತರಣೆ ಯೋಜನೆಯಲ್ಲಿ ರಾಜ್ಯದ ಬೊಕ್ಕಸಕ್ಕೆ 77 ಕೋಟಿ ರೂಪಾಯಿ ನಷ್ಟವುಂಟು ಮಾಡಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಸರ್ಕಾರ ಖಾಸಗಿ ಸಂಸ್ಥೆಯೊಂದರ ಜೊತೆ ಶಾಮೀಲಾಗಿ ಗರ್ಭಿಣಿಯರಿಗೆ ಪೌಷ್ಟಿಕಾಂಶವುಳ್ಳ ಆಹಾರ ಕಿಟ್‌ಗಳನ್ನು ಒದಗಿಸುವ ಯೋಜನೆಯಲ್ಲಿ ರಾಜ್ಯದ ಬೊಕ್ಕಸಕ್ಕೆ 77 ಕೋಟಿ ರೂಪಾಯಿಯನ್ನು ಲಪಟಾಯಿಸಿದೆ ಎಂದು ಆರೋಪಿಸಿದೆ.
ಈ ಬಗ್ಗೆ ತಮಿಳುನಾಡು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ಕೆ.ಅಣ್ಣಾಮಲೈ ಮಾತನಾಡಿ, ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡ ಖಾಸಗಿ ಸಂಸ್ಥೆಯು ಗರ್ಭಿಣಿಯರಿಗೆ ಪೌಷ್ಟಿಕಾಂಶದ ಕಿಟ್ ಅನ್ನು ಸರ್ಕಾರಿ ಏಜೆನ್ಸಿಗಳಿಗೆ ಹೋಲಿಸಿದರೆ ದ್ವಿಗುಣ ವೆಚ್ಚದಲ್ಲಿ ನೀಡಿದೆ. ಕಿಟ್ನ ಬೆಲೆ ಶೇ.60ರಷ್ಟು ಹೆಚ್ಚಾಗಿ ತೋರಿಸಲಾಗಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 77 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ದೂರಿದ್ದಾರೆ.