ಚೆನ್ನೈ(ತಮಿಳುನಾಡು):ಮೇಕೆದಾಟು ಅಣೆಕಟ್ಟು ಸಮಸ್ಯೆ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಜುಲೈ 12ರಂದು ಸರ್ವ ಪಕ್ಷ ಸಭೆ ಕರೆದಿದ್ದಾರೆ. ಈ ಸಭೆಯನ್ನು ರೈತರ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ತಮಿಳುನಾಡಿನ ಎಲ್ಲಾ ಪಕ್ಷಗಳು ಸರ್ವಾನುಮತದಿಂದ ನಡೆಸುವ ಸಭೆ ಎಂದು ತಮಿಳುನಾಡು ಸರ್ಕಾರ ಶುಕ್ರವಾರ ಹೇಳಿದೆ.
ಕೆಲವು ದಿನಗಳ ಹಿಂದೆ ಸ್ಟಾಲಿನ್, ಸಿಎಂ ಬಿ.ಎಸ್.ಯಡಿಯುರಪ್ಪ ಅವರಿಗೆ ಪತ್ರ ಬರೆದಿದ್ದು, ಪ್ರಸ್ತಾವನೆಯಲ್ಲಿರುವ ಮೇಕೆದಾಟು ಅಣೆಕಟ್ಟು ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧವಾಗಿದೆ ಮತ್ತು ತಮಿಳುನಾಡು ರೈತರ ಹಿತಾಸಕ್ತಿ ವಿರುದ್ಧವಾಗಿ ಪರಿಣಾಮ ಬೀರುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದು, ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.